ನೇಪಾಳ ಮತ್ತು ಭೂತಾನ್ ನಡುವೆ ಸಿಕ್ಕಿಹಾಕಿಕೊಂಡ ಸಿಕ್ಕಿಂನ ಕಥೆ ನಿಮ್ಮ ಮುಂದೆ. ಡಾರ್ಜಲಿಂಗ್ ನಲ್ಲಿಳಿದು ಸಿಕ್ಕಿಂಗೆ ಕಾಲಿಪೊಂಗ್ ಮೂಲಕ ದಾಟಿಕೊಂಡ ಅನನ್ಯ ಅನುಭವ.
ಲಾಚೆನ್
ಟೂ ಲಾಚುಂಗ್ ….
ಸಿಕ್ಕಿಂನ ಲಾಚೆನ್ನಿಂದ ಲಾಚುಂಗ್ಗೆ ಬಂದಾಗ ಇಳಿಸಂಜೆ. ನಮ್ಮ ದಾರಿಗುಂಟ ಹರಿದ ನದಿಯ ಹೆಸರನ್ನು ಯಾರಲ್ಲೇ ಕೇಳಿದರು ಹೇಳುವ ಹೆಸರೊಂದೇ ತೀಸ್ಟಾ!
ಲಾಚುಂಗ್‌ನ
ಪ್ರತಿ ಮನೆಯ ದಣಪೆ ಆಚೆಗಿನ ದಾರಿ ದಾಟುತ್ತಲೇ ಸಿಕ್ಕಿಂನ ತೀಸ್ಟಾ ನದಿ ಮೌನವಾಗಿ ಹರಿಯುತ್ತಾಳೆ. ಎಲ್ಲೆಲ್ಲೂ
ಅಡ್ಡಗಟ್ಟಿಸಿಕೊಂಡು ಮನುಜನ ಅಭೀಪ್ಸೆಗೆ ಬಲಿಯಾಗಿ ʼಹರಿʼ ಯುತ್ತಾ ಅನೇಕರ ತುತ್ತಿನ ಚೀಲಕ್ಕೂ ದಾರಿಯಾಗಿದ್ದಾಳೆ. ಸಿಕ್ಕಿಂನ ಲಾಚುಂಗ್ ಕಣಿವೆಯುದ್ದಕ್ಕೂ ಬೆಳೆವ ಸೊಪ್ಪು ತರಕಾರಿಗಳಲ್ಲಿ ಇವಳದೇ ಪರಿಮಳ. ಸಿಕ್ಕಿಂನಲ್ಲಿ ಹುಟ್ಟಿ ತಾಯಿಯಾದವಳು ಬಂಗಾಲಕ್ಕೆ ಬರುತ್ತಲೇ ಕಾಳಿಯಾಗುತ್ತಾಳೆ. ಇಬ್ಬರಿಗೂ ನದಿಯು ಸೇತುವೆ ಕಟ್ಟಿದೆ. ಇವಳು ಸಿಕ್ಕಿಂನಿಂದ ಬ್ರಹ್ಮ ಪುತ್ರ ನದಿಯನ್ನು ಅಪ್ಪುವವರೆಗಿನ ತನ್ನ ದೀರ್ಘ ಪಯಣದಲ್ಲಿ ಮನುಜರ ಅಪರಿಮಿತ ಅಭೀಪ್ಸೆಗೆ ಕನಿಕರಿಸಿದ್ದಾಳೆ. ಬಂಗಾಲಿಗರಿಗೆ ಬುಟ್ಟಿ ತುಂಬಾ ಮೀನಿತ್ತು ಹರಿಸಿದ್ದಾಳೆ. ತೀಸ್ಟಾ ನದಿಯ ಟ್ರಾಟ್ ಮೀನಿನ ರುಚಿ ಅತ್ಯದ್ಭುತ. ಗುಡ್ಡ ಗುಡ್ಡಗಳ ಹನಿಗಳಿಗೂ ಇವಳ ಪ್ರೇಮ. ಲಾಚೆನ್ ನಿಂದ ಝೀರೋ ಪಾಯಿಂಟ್ ತಲುಪುವವರೆಗಿನ ಇವಳ ಸಂಗಗಕ್ಕೆ ಸಿಲುಕಿದ ನೂರಾರು ಝರಿಗಳ ಕಥನವು ವಿಭಿನ್ನ. ಬನ್ನಿ ಹರಿ ಕಥೆ ಶುರು ಮಾಡೋಣ!
ತಿರುಗಿದೆ ವಿಳಾಸವಿಲ್ಲದೇ -
ಲಾಚೆನ್ ದಾಟುತ್ತಲೇ ಯುಗಾಂಗ್ ಜಲಧಾರೆಯೊಂದು ಅದೆಲ್ಲಿಂದಲೋ ಇದನ್ನು ಕಾಣಲು ಕಾತರತೆಯಿಂದ ಧುಮುಕುತ್ತದೆ. ಕಿವಾ ಎಂಬ ಇನ್ನೊಂದು ಜಲಧಾರೆ ನಾನೆಂಬ ನಾನು ಯಾವುದಕ್ಕೂ ಕಡಿಮೆ ಇಲ್ಲ ಎನ್ನುತ್ತಾ ಬಳುಕುತ್ತಾ ಹೋಗಿ ಬರುವವರಿಗೆಲ್ಲಾ ಟಾಟಾ ಬಾಯ್ ಬಾಯ್ ಮಾಡುತ್ತಿದ್ದಳು.
ಪದ್ಯಗಳ ಅಡಿಗಡಿಗೆ ನುಗ್ಗುವ ಪ್ರಾಸದಂತೆ ಪ್ರಯಾಸವಿಲ್ಲದೇ ಗಿರಿ ನೆತ್ತಿಗಳ ಮೇಲಿಂದ ಸುರಿಯುತ್ತಲೇ ಇರುತ್ತದೆ. ಇವರನ್ನೆಲ್ಲಾ ಸೆರಗಿಗೆ ಕಟ್ಟಿಕೊಂಡು ಬ್ರಹ್ಮ ಪುತ್ರದೊಡಲಿಗೆ ಸೇರಲು ತವಕದಿ ಓಡುತ್ತಾಳೆ ತೀಸ್ಟಾ.
ತಣ್ಣಗಿನ ಊರಿನ ಬಿಸಿ ನೀರ ಬುಗ್ಗೆ…
ರಸ್ತೆ ರಿಪೇರಿಗೆ ನಿಂತ ಕಿನ್ನರರು ಎಲ್ಲಿಗೆ ಹೊರಟಿರುವಿರಿ ಎಂದು ಸನ್ನೆಯಲ್ಲೇ ಕೇಳುವರು. ಬ್ರೆಡ್ಡು ಕೂಡಿಟ್ಟಂತಹ ಕಲ್ಲು ರಸ್ತೆಯಲ್ಲಿ ಎಣ್ಣೆ ಕುಡಿದವರಂತೆ ಜೀಪು ಜೋಲಿ ಹೊಡೆಯುತ್ತಿತ್ತು. ಕೆಲವು ಕಲ್ಲುಗಳು ನಮ್ಮನ್ನು ಕಾಣಲು ರಸ್ತೆ ಬದಿಗೆ ಬಂದು ನಿಂತಿದ್ದವು!!
ಪ್ರತೀ ಕುಲುಕಾಟಕ್ಕೂ ಬೆನ್ನು ಹುರಿಯ ಲೆಕ್ಕ ಸಿಗುತ್ತಿತ್ತು. ಹೊಸ ಹಾದಿಯ ಹುಡುಕಾಟದಲ್ಲಿ ಇದೆಲ್ಲಾ ಮಾಮೂಲು ಎಂಬ ಹಸಿ ವೇದಾಂತ. ಇಂತಹ ಪರಿಸ್ಥಿತಿಯಲ್ಲೂ ತಣ್ಣಗೆ ಬದುಕುವ ಇವರ ಪ್ರಶಾಂತತೆಗೆ ದೊಡ್ಡ ಹೊಟ್ಟೆ ಕಿಚ್ಚು.
ಪ್ರತೀ ಕುಲುಕಾಟಕ್ಕೂ ಬೆನ್ನು ಹುರಿಯ ಲೆಕ್ಕ ಸಿಗುತ್ತಿತ್ತು. ಹೊಸ ಹಾದಿಯ ಹುಡುಕಾಟದಲ್ಲಿ ಇದೆಲ್ಲಾ ಮಾಮೂಲು ಎಂಬ ಹಸಿ ವೇದಾಂತ. ಇಂತಹ ಪರಿಸ್ಥಿತಿಯಲ್ಲೂ ತಣ್ಣಗೆ ಬದುಕುವ ಇವರ ಪ್ರಶಾಂತತೆಗೆ ದೊಡ್ಡ ಹೊಟ್ಟೆ ಕಿಚ್ಚು.
ಹೂ ಕಣಿವೆಯ ಧ್ಯಾನ
ಅಚಾನಕ್ ಆಗಿ ಆಯ್ದುಕೊಂಡ ಹೊಸ ದಾರಿಯಲ್ಲಿ ಸಿಕ್ಕ ಸಿಕ್ಕಿಂನ ಹೂ ಕಣಿವೆಯ ಯುಮ್ ತುಂಗ್ ಕಣಿವೆ ಮತ್ತು ಶಿಂಗ್ ಬಾ ರೆಡೋಡೆಂಡ್ರಾನ್ ಹೂ ಕಣಿವೆ. ಹೂ ಕಣಿವೆ ಸವಿಯಲು ಲಾಚುಂಗ್ ನಲ್ಲಿ ತಂಗಲೇ ಬೇಕು!
ಬೆಟ್ಟಕ್ಕೆ ಕಾವಲು ನಿಂತ ಇಂಡೋ ಟಿಬೇಟಿಯನ್ ಬೆಟಾಲಿನ್ . ನಾರಿ ಕೊರಳ ಹಾರದಂತೆ
ಊರ ಹೆಬ್ಬಾಗಿಲಿನಲ್ಲಿ ಬೆಟ್ಟವೊಂದಕ್ಕೆ ನಾಚಿಕೆ ಇಲ್ಲದೇ ಜಲಪಾತವೊಂದು ಜೋತುಬಿದ್ದಿತ್ತು. ಓಂ ಮಣಿ ಪದ್ಮೇ ನಮಃ ಹೀಗೆ ಬೌಧ್ದರ ಭಾಷೆಯಲ್ಲಿನ ಭೌದ್ಧ ಧ್ವಜ ತೂಗುಹಾಕಲಾಗಿತ್ತು. ಊರ ಮಹನೀಯರಲ್ಲಿ ಹೆಸರ ಕೇಳಿದರೆ ನೀವೇ ಒಂದು ನಾಮಕರಣ ಮಾಡಿಕೊಳ್ಳಿ ಎಂದು ನಿರ್ಲಿಪ್ತರಾದರು. ಊರ ಬೀದಿಯಲ್ಲಿ ಲಾಚುಂಗ್ ನದಿಯ ಹಿಮ್ಮೇಳ.
ಹೊಟ್ಟೆ ಹಸಿದುದರಿಂದ ಬಜ್ಜಿ ಅಂಗಡಿಗೆ ಅಡಿ ಇಟ್ಟೆವು. ನೀರ ಕಣದೊಂದಿಗೆ ಬೆರೆತ ನದಿಯ ಹಿಮ್ಮೇಳ. ಸಂತೃಪ್ತ ಜನ. ಊರು ತಿಳಿಯಲು ನಾಲ್ಕು ಸುತ್ತು ಬಂದೆವು. ಎರಡು ಹಾಡಿನಷ್ಟೇ ದೂರದ ಪುಟಾಣಿ ಊರು.
ಊರಿನ ಪೂರ್ವ ತುದಿಯಲ್ಲಿ ತಂಗಲು ವ್ಯವಸ್ಥೆಯಾಗಿತ್ತು. ಜವೆ ಗೋಧಿ, ಬಾರ್ಲಿ, ಹೂ ಕೋಸು, ಆಲೂಗಡ್ಡೆಯ ತೋಟದ ನಡುವೆ ನಮಗೆ ರೂಂ ನೀಡಲಾಗಿತ್ತು. ಕರಿ ಮಣ್ಣಿನ ತೋಟದಲಿ ಹೂಕೋಸು ನಲಿಯುತ್ತಿತ್ತು. ಕೈ ಎಟುಕಿದರೆ ಹೂ ಕೋಸು.
ಧ್ಯಾನಕ್ಕೆ, ಆಧ್ಯಾತ್ಮಕ್ಕೆ ಹೇಳಿ ಮಾಡಿಸಿದ ಊರು. ಇಲ್ಲಿಂದ ಶಿಂಗ್‌ಬಾ ಹೂ ಕಣಿವೆಗೆ ಬರೀ 23 ಕಿ.ಮೀ. ಸಂಜೆಯ ರಗ್ ಬಿಚ್ಚುತ್ತಲೇ ಚಳಿ ಅಮರಿಕೊಂಡಿತು. ಊರ ತುದಿಯಲ್ಲೊಂದು ತೊರೆ. ತೊರೆಗೆ ಕಾಲು ಬಿಟ್ಟು ಬೆಟ್ಟವೊಂದು ನಿಂತಿತ್ತು. ಬೆಟ್ಟದ ನೆತ್ತಿಯಲಿ ಐಸ್ ಕ್ರೀಂ ಟೋಫಿ. ಅದರ ಬುಡವ ಕಡಿದು ಅಲೆ ಅಲೆಯಾಗಿ ಗದ್ದೆ ನಿರ್ಮಿಸಿದ್ದರು. ಕೆಲವು ಗದ್ದೆಗಳಲ್ಲಿ ಹೋಂ ಸ್ಟೇ ತಲೆ ಎತ್ತಿದ್ದವು.
ಬೆಳ್ಳಂ ಬೆಳಿಗ್ಗೆ ಹೂ ಕಣಿವೆಯತ್ತ…
ಮಗುಚಿ ಬಿದ್ದ ಶಿಂಗ್‌ಬಾ ರೆಡೋ ಡೆಂಡ್ರಾನ್ ಸ್ಯಾಂಚುರಿಯ ದಾರಿಯಲಿ ಸರ್ಕಸ್ ಮಾಡುತ್ತಾ ನಮ್ಮ ರಥವೇರಿ ಹೊರಟಾಗ ಮನದ ಕದ ತೆರೆದಂತೆ ಬೆಟ್ಟಗಳ ಕದವನ್ನು ಯಾರೋ ತೆರೆದಿಟ್ಟಂತೆ, ತಾಜಾ ಮಾವಿನ ರುಚಿಯಂತೆ, ತಾಜಾ ಕವಿತೆಯಂತೆ ಹೊಸ ಲೋಕವೊಂದು ತೆರೆದುಕೊಂಡಿತು. ದೂರದಿಂದ ಬಂದ ನಮ್ಮನ್ನು ಕಾಣಲು ನೂರಾರು ಕಲ್ಲುಗಳು ಕೈಯಲ್ಲಿ ಕಳಶವಿಲ್ಲದೇ ರಸ್ತೆ ಗುಂಟ ನೆರೆದಿದ್ದವು!!
ಅಮರೀಶ ಪುರಿಯ ಗಡ್ಡದಂತಹ ರಸ್ತೆ. ರಸ್ತೆ ಯಿಂದ ಅನತಿ ದೂರದಲ್ಲಿ ಹರಿವ ತಿಳಿ ಹಸಿರ ಲಾಚುಂಗ್ ನದಿ. ಹಳ್ಳಿಗರಿಗೆ ತೀಸ್ಟಾ. ಲಾಚುಂಗ್ ದಾಟುತ್ತ ಸ್ವಲ್ಪ ದೂರದಲ್ಲೇ ಶಿಂಗ್‌ಬಾ ರೆಡೋಡೆಂಡ್ರಾನ್ ಹೂ ಕಣಿವೆ.
ಸ್ವಾಗತಿಸಲು ನಿಂತಂತೆ ಕಾಣುವ ಸಾಲು ಸಾಲು ಡೆಂಡ್ರಾನ್ ಮರ. ಪ್ರತಿ ಮರದಲ್ಲೂ ಅರಳಿ ನಿಂತ ನೂರಾರು ಡೆಂಡ್ರಾನ್ ಪುಷ್ಪಗಳು. ಕ್ರಿಸ್ ಮಸ್ ಮರಕ್ಕೆ ಶೃಂಗರಿಸಿದಂತೆ ಕೆಂಪು, ತಿಳಿ ಅರಶಿನ, ನೇರಳೆ ಹೂ ಶೃಂಗಾರ. ತಣ್ಣಗೆ ಹಸಿರಾಗಿ ಹರಿವ ನದಿ. ಸದಾ ತಣ್ಣಗಿರುವ ಹಿಮ ಪಾತ್ರೆಯಂತಹ ಹಲವು ಹೆಕ್ಟೇರ್ ಜಾಗವನ್ನು ಶಿಂಗ್‌ಬಾ ರೆಡೋ ಡೆಂಡ್ರಾನ್ ಸ್ಯಾಂಚರಿ ಎಂದು ನಾಮಕರಿಸಿದ್ದಾರೆ. ಯಾವುದೇ ಹೆಸರಿನ ಹಂಗಿಲ್ಲದ ನೂರಾರೂ ಹೂಗಳು ಕಣಿವೆಯುದ್ದಕ್ಕೂ ಅರಳಿ ಸ್ವಾಗತಕ್ಕೆ ನಿಂತಿದ್ದವು. ಭಾರತದ ವಿಶಿಷ್ಟ ಸ್ಯಾಂಚುರಿಯಲ್ಲಿ ನಾವಿದ್ದೆವು. ಎಪ್ರಿಲ್ ತಿಂಗಳು ಇಲ್ಲಿಗೆ ಭೇಟಿಕೊಡಲು ಪ್ರಶಸ್ತ. ಹಿಮಾಲಯದ ತಪ್ಪಲಿನಲಿ ಕೆಂಪು ರೆಡೋ ಡೆಂಡ್ರಾನ್ ಹೂಗಳು ಸಾಮಾನ್ಯ ಮತ್ತು ಸರ್ವಾಂತರಯಾಮಿ.
ಆದರಿಲ್ಲಿ ನೀವು 24 ಬಗೆಯ ರೆಡೋ ಡೆಂಡ್ರಾನ್ ಹೂಗಳಿಗೆ ಸಾಕ್ಷ್ಯವಾಗಬಹುದು. ಪ್ರತಿ ಹೂವು ವಿಶಿಷ್ಟ. ಜೊತೆಗೆ ಲಾಚುಂಗ್ ನಿಂದ 23 ಕಿ. ಮಿ ದೂರವಿರುವ ಝೀರೋ ಪಾಯಿಂಟ್ ಗೆ ಹೋಗಿ ಮನಸೋ ಇಚ್ಛೆ ಆಡಬಹುದು.
ಡೆಂಡ್ರಾನ್ ಹೂಗಳಿಗೆ ಮುತ್ತಿಕ್ಕಿ ಮುಂದಡಿ ಇಟ್ಟೆವು. ವಸಂತ ಕಾಲಿಡುತ್ತಿದ್ದಂತೆ ಯಾಕ್‌ಗಳನ್ನು ಇಲ್ಲಿ ಮೇಯಿಸಲಾಗುತ್ತದೆ. ವಸಂತವಿಡಿ ಕಣಿವೆಯಲ್ಲಿ ಮೆಂದು ಮಳೆಗಾಲಕ್ಕೆ ಮತ್ತೆ ಮರಳುತ್ತವೆ. ಸ್ಥಳೀಯರು ತಮ್ಮ ಗೂಡಿಗೆ ಅವನ್ನು ಕರೆತರುತ್ತಾರೆ. ಐರಿಸ್, ಪ್ರಿಮುಲಾಸ್, ಪೊಪ್ಪಿಸ್ ಗಿಡಗಳನ್ನು ಬೀಜ ಸಮೇತವಾಗಿ ತಿಂದು ಗೊಬ್ಬರ ದಾನ ಮಾಡುತ್ತವೆ. ಮರು ವರುಷ ಹಿಮ ಕರಗಿದಂತೆ ಒಂದೊಂದಾಗಿ ಮತ್ತೆ ಚಿಗುರಿ ಹೂ ಅರಳಿಸುತ್ತದೆ. ಶಿಂಗ್‌ಬಾ ರೆಡೋ ಡೆಂಡ್ರಾನ್ ಸ್ಯಾಂಚುರಿ ಮದುವಣ ಗಿತ್ತಿಯಂತೆ ಮತ್ತೆ ತೋರುತ್ತದೆ. ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತದೆ.
ಶಿಂಗ್‌ಬಾ ರೆಡೋ ಡೆಂಡ್ರಾನ್ ಸ್ಯಾಂಚುರಿಯಿಂದ ಮುಂದಕ್ಕೆ…
ಶಿಂಗ್‌ಬಾ ರೆಡೋ ಡೆಂಡ್ರಾನ್ ಸ್ಯಾಂಚುರಿಯ ಸನಿಹದಲ್ಲೇ ಇರುವ ಇನ್ನೊಂದು ಸ್ಥಳ ಹಾಟ್ ಸ್ಪ್ರಿಂಗ್.
ಇಲ್ಲಿನ ಬೆಟ್ಟಗಳು ಸಡಿಲ ಮಣ್ಣಿನ ಬೆಟ್ಟಗಳು. ಅಲ್ಲಲ್ಲಿ ಬಾಯ್ದೆರೆದು ಬಿಸಿ ನೀರಿನ ಬುಗ್ಗೆಗಳ ಉಗುಳುತ್ತವೆ. ಒಡಲೊಳಗಿನ ರಾಸಾಯನಿಕಗಳನ್ನೆಲ್ಲಾ ಕರಗಿಸಿಕೊಂಡು ಮೇಲಕ್ಕೆ ಚಿಮ್ಮುತ್ತದೆ. ಹೆಚ್ಚಿನವುಗಳಲ್ಲಿ ಗಂಧಕದ ಪರಿಮಳ. ಹೂ ಕಣಿವೆಯ ದಾಟುತ್ತಿದ್ದಂತೆ ಬೃಹತ್ ಬೆಟ್ಟದ ಬುಡದಲ್ಲೊಂದು ಬಿಸಿ ನೀರಿನ ಬುಗ್ಗೆ. ಬುಗ್ಗೆಯ ಬಿಸಿ ನೀರನ್ನು ತೊಟ್ಟಿಯೊಂದಕ್ಕೆ ಹಾಯಿಸಿ ತಣ್ಣೀರನ್ನೂ ಮಿಶ್ರ ಮಾಡಿ ನೀರ ತಾಪವನ್ನು ಕಡಿಮೆ ಗೊಳಿಸಿದ್ದರು.
ಆ ತೊಟ್ಟಿಯಲ್ಲಿದ್ದ ಕೊಳಕನ್ನು ನೋಡಿ ಅಸಹ್ಯವೆನಿಸಿ ಹಾಗೇ ಬಂದೆವು. ನೀರು ಸಹಾ ವಿಪರೀತ ಬಿಸಿಯಿತ್ತು.
ಹೊಟ್ಟೆ ತನ್ನ ಏಕತಾಳ ಶುರುವಿಟ್ಟುಕೊಂಡಿತು. ೪೬ ನೆಯ ನಂಬರಿನ ಅಂಗಡಿಗೆ ನುಗ್ಗಿದೆವು. ಯಾವನೋ ಒಬ್ಬ ಯಾಕ್ ನ ಮಾಂಸ ಹದ ಮಾಡುತ್ತಾ ಕುಳಿತಿದ್ದ. ದೂರದಲ್ಲಿ ಹಸನ್ಮುಖಿ ಅಜ್ಜಿಯೊಬ್ಬಳು ಶಾಖಹಾರಿ ತುಪ್ಕಾ ತಯಾರಿಯಲ್ಲಿದ್ದಳು.
ನಾವು ಅನುಮಾನಿಸ ತೊಡಗಿದೆವು. ಶುದ್ಧ ಶಾಖಹಾರಿ ಎಂದು ಮತ್ತೊಮ್ಮೆ ಒತ್ತಿ ಹೇಳಿದಳು. ನಾವು ಆರ್ಡರಿಸಿ ಸಿಕ್ಕಿಂನ ಸ್ಪೆಷಲ್ ತುಪ್ಕಾ ಸವಿದೆವು. ಹೊಟ್ಟೆ ಮತ್ತು ಮನಸ್ಸನ್ನು ತಣಿಸಿತು.
ಪಂಜಾಬಿ ಕುಟುಂಬವೊಂದು ಬಂದು ಬುಗ್ಗೆಯ ನೀರನ್ನು ಮೆಲಕ್ಕೆ ಚಿಮ್ಮಿಸಿದರು. ಮೌನದ ಬಗ್ಗೆ ಮತ್ತು ಸಾರ್ವಜನಿಕ ನಡೆವಳಿಕೆಯ ಕುರಿತು ವಿವರಿಸಿ ಹೇಳುವುದು ವ್ಯರ್ಥ ಎಂದು ಒಂದೂ ಮಾತನಾಡದೆ ಸುಮ್ಮನೆ ಬಂದೆ. ಸಾರ್ವಜನಿಕ ಸ್ಥಳಗಳಲ್ಲಿ ಹೇಗೆ ವರ್ತಿಸಬೇಕೆಂಬ ಮೂಲಪಾಠವನು ಇವರಿಗೆ ಕಲಿಸುವವರು ಯಾರು? ದಾಂದಲೆಗೆ ಕಿವುಡಾಗಿ ಯುಮ್ತಾಂಗ್ ಕಣಿವೆಯ ಸೌಂದರ್ಯವನು ಸವಿಯುತ್ತಾ ಕುಳಿತೆ. ಅಮ್ಮನ ನೀಲಿ ಸೆರಗಿನಂತೆ ತಿಳಿ ಹಸಿರಾಗಿ ಲಾಚುಂಗ್ ನದಿ ಹರಿಯುತ್ತಲೇ ಇತ್ತು. ದೂರದ ಝೀರೋ ಪಾಯಿಂಟ್‌ನಲ್ಲಿ ಹಿಮ ಹೊದ್ದ ಬೆಟ್ಟಗಳು ಕಣಿವೆಗೆ ನೀರುಣಿಸುವ ಬೆಟ್ಟದ ಮಹಾ ಮೊಲೆಗಳಂತೆ ಕಂಡವು.
ಜೋಳಿಗೆಯಲ್ಲಿ ಅಡಗಿದ್ದ ನಾಲ್ಕು ರೆಡೋಡೆಂಡ್ರಾನ್ ಹೂಗಳು ಕಿವಿ ಏರಿ ಖುಷಿ ಪಟ್ಟವು. ಕೆಲವನ್ನು ಚಟ್ನಿ ಮಾಡುವ ಆಸೆಯಿಂದಲೂ ತೆಗೆದುಕೊಂಡೆ. ಕಾಡಿಗೆ ಬೆಂಕಿ ಬಿದ್ದಂತೆ ಗಿರಿಯ ನೆತ್ತಿ ತುಂಬಾ ಡೆಂಡ್ರಾನ್ ಹೂಗಳ ರಾಶಿ ರಾಶಿ.
ತುದಿಯಿಂದ ತುದಿಗೆ ಜೋಕಾಲಿಯಂತೆ ನೇತುಬಿದ್ದ ತೂಗು ಸೇತುವೆಯಲಿ ನಿಂತು ಪ್ರಕೃತಿಯಲಿ ಕರಗಿದೆವು. ಬೆಟ್ಟಕ್ಕೂ ಬಯಲಿಗೂ ಸೇತುವೆಯಾದ ನದಿ, ಬಯಲ ಕನಸು ಹೊತ್ತು ತಣ್ಣಗೆ ಹರಿಯುತ್ತಿತ್ತು. ಪಾಪ ಏನೋ ಧಾವಂತ. ನಾವು ಬೆಟ್ಟ ಅರಸಿ ಬಂದಿದ್ದೆವು. ನಮಗ್ಯಾವ ಧಾವಂತವೂ ಇರಲಿಲ್ಲ.
ತುದಿಯಿಂದ ತುದಿಗೆ ಜೋಕಾಲಿಯಂತೆ ನೇತುಬಿದ್ದ ತೂಗು ಸೇತುವೆಯಲಿ ನಿಂತು ಪ್ರಕೃತಿಯಲಿ ಕರಗಿದೆವು. ಬೆಟ್ಟಕ್ಕೂ ಬಯಲಿಗೂ ಸೇತುವೆಯಾದ ನದಿ, ಬಯಲ ಕನಸು ಹೊತ್ತು ತಣ್ಣಗೆ ಹರಿಯುತ್ತಿತ್ತು. ಪಾಪ ಏನೋ ಧಾವಂತ. ನಾವು ಬೆಟ್ಟ ಅರಸಿ ಬಂದಿದ್ದೆವು. ನಮಗ್ಯಾವ ಧಾವಂತವೂ ಇರಲಿಲ್ಲ.
ಬಯಲಿನ ಬದುಕು ಹಸನಾಗಲು ಬೆಟ್ಟ ಹಿಮ ಹೊರಬೇಕು ಮತ್ತು ಸದಾ ಕರಗುತ್ತಲೇ ಇರಬೇಕು. ಯಾವುದನ್ನೋ ಸಲಹಲು ಇನ್ನಾವುದನ್ನೋ ಕರಗಿಸುವ ಗಾರುಡಿಗ ಈ ಪ್ರಕೃತಿಯ. ಈ ಎಲ್ಲಾ ಪ್ರಕೃತಿಯ ವಿಸ್ಮಯದಿಂದ ಝೀರೋ ಪಾಯಿಂಟ್ ಕೆಲವೇ ಕಿಲೋ ಮೀಟರ್.
ಹೊಟ್ಟೆ ತನ್ನ ಏಕತಾಳ ಶುರುವಿಟ್ಟುಕೊಂಡಿತು. ೪೬ ನೆಯ ನಂಬರಿನ ಅಂಗಡಿಗೆ ನುಗ್ಗಿದೆವು. ಯಾವನೋ ಒಬ್ಬ ಯಾಕ್ ನ ಮಾಂಸ ಹದ ಮಾಡುತ್ತಾ ಕುಳಿತಿದ್ದ. ದೂರದಲ್ಲಿ ಹಸನ್ಮುಖಿ ಅಜ್ಜಿಯೊಬ್ಬಳು ಶಾಖಹಾರಿ ತುಪ್ಕಾ ತಯಾರಿಯಲ್ಲಿದ್ದಳು.
ನಾವು ಅನುಮಾನಿಸ ತೊಡಗಿದೆವು. ಶುದ್ಧ ಶಾಖಹಾರಿ ಎಂದು ಮತ್ತೊಮ್ಮೆ ಒತ್ತಿ ಹೇಳಿದಳು. ನಾವು ಆರ್ಡರಿಸಿ ಸಿಕ್ಕಿಂನ ಸ್ಪೆಷಲ್ ತುಪ್ಕಾ ಸವಿದೆವು. ಹೊಟ್ಟೆ ಮತ್ತು ಮನಸ್ಸನ್ನು ತಣಿಸಿತು.
ಇಂತಹ ಅವಿಸ್ಮರಣೀಯ ವಿಸ್ಮಯಗಳಿಗೆ ಸಾಕ್ಷಿಯಾಗಿ ಬಂದು ಏಳು ವರ್ಷ ಕಳೆದರೂ ಲಾಚುಂಗ್ ನದಿಯ ಬೋರ್ಗೆರೆತ ದೊಂದಿಗೆ ಬೆರೆತ ರೆಡೊ ಡೆಂಡ್ರಾನ ಹೂವ ಗಂಧವಿನ್ನು ನನ್ನ ನಾಸಿಕಾಗ್ರದಲ್ಲೇ ಇದೆ. ಇವುಗಳ ಪರಿಮಳಕ್ಕೆ ಸಾಕ್ಷಿಯಾಗಲು ತೀಸ್ಟಾ ನದಿಯ ಜುಳು ಜುಳುಗೆ ಕಿವಿಯಾಗಲು ನೀವು ಯಾವಾಗ ಬರುವಿರಿ.
No comments:
Post a Comment